ಡಿವಿಜಿ ಸುದ್ದಿ, ಮೈಸೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಜುಲೈ 03 ಶುಕ್ರವಾರದಿಂದ ಸಂಜೆ 6 ಗಂಟೆ ನಂತರ ಜಿಲ್ಲೆಯ ಎಲ್ಲ ವ್ಯಾಪಾರ-ವಹಿವಾಟು ಬಂದ್ ಆಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲಾ ಅಧಿಕಾರಿಗಳ ಜೊತೆ ಒಂದು ಗಂಟೆಯ ಕಾಲ ಚರ್ಚೆ ಮಾಡಿದ್ದೇವೆ. ಶುಕ್ರವಾರದಿಂದ ಸಂಜೆ 6 ಗಂಟೆಯ ನಂತರ ಎಲ್ಲಾ ತರಹದ ವ್ಯಾಪಾರ ಸ್ಥಗಿತಗೊಳಿಸಲು ತೀರ್ಮಾನಿಸಿದ್ದೇವೆ ಎಂದರು.
ಮಾಸ್ಕ್ ಧರಿಸದಿದ್ದರೆ 200 ದಂಡ
ಎಲ್ಲ ಎಪಿಎಂಸಿ ಹಾಗೂ ಮಾರುಕಟ್ಟೆಗಳಲ್ಲಿ ಬೆಳಗ್ಗೆ ಬರುವ ಗ್ರಾಹಕರಿಗೆ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ಜೊತೆಗೆ ಅಂತರ ಕಾಯುಕೊಳ್ಳಬೇಕು. ಇನ್ನೂ ಶುಕ್ರವಾರದಿಂದ ಮಾಸ್ಕ್ ಧರಿಸದಿದ್ದರೆ 200 ರೂಪಾಯಿ ದಂಡ ವಿಧಿಸಲಾಗುತ್ತದೆ. ಗ್ರಾಮಾಂತರ ಭಾಗದಲ್ಲಿ 100 ರೂಪಾಯಿ ದಂಡ ಹಾಕಲಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ ಪೊಲೀಸರಿಗೆ ನೆಗಡಿ, ಜ್ವರ ಬಂದಿದ್ದರೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು. ಮಹಾನಗರ ಪಾಲಿಕೆ ಸಿಬ್ಬಂದಿಗೂ ಟೆಸ್ಟ್ ಕಡ್ಡಾಯ ಎಂದರು.



