ಡಿವಿಜಿ ಸುದ್ದಿ, ತುಮಕೂರು: ಆಗಸ್ಟ್ ನಂತರವಷ್ಟೇ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ನಗರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಮೊದಲಿಗೆ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳು, ತದನಂತರ ಹಿರಿಯ ಪ್ರಾಥಮಿಕ, ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಆಲೋಚನೆ ಇದೆ ಎಂದು ತಿಳಿಸಿದರು.
ಶಾಲೆ ಆರಂಭಿಸುವ ಕುರಿತು ಈಗಾಗಲೇ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲರ ಅಭಿಪ್ರಾಯ ಕ್ರೋಡೀಕರಿಸಿ ಆಗಸ್ಟ್ ನಲ್ಲಿ ಶಾಲೆ ಓಪನ್ ಮಾಡುವ ತೀರ್ಮಾನಕ್ಕೆ ಬರಲಾಗುವುದು. ಪ್ರಸಕ್ತ ಪರೀಕ್ಷೆಯಲ್ಲಿ ಶೇ 98ರಷ್ಟು ಹಾಜರಾತಿ ಇದೆ. ಕೊರೊನಾ ಸೋಂಕಿನ ಭಯ ಇದ್ದರೂ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದರು.
ಸಾರಿಗೆ, ಆರೋಗ್ಯಸೇರಿದಂತೆ ವಿವಿಧ ಇಲಾಖೆಗಳು ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಕೈ ಜೋಡಿಸಿವೆ. ಇದರಿಂದ ಈ ಬಾರಿಯ ಯಶಸ್ವಿಯಾಗಿದೆ ಎಂದು ತಿಳಿಸಿದರು.



