ಲಂಡನ್: ವರ್ಣಭೇದ ನೀತಿಯು ವ್ಯವಸ್ಥೆಯಲ್ಲಿ ಗಟ್ಟಿಯಾಗಿ ನೆಲೆಯೂರಿದೆ. ಈ ಪಿಡುಗನ್ನು ನಿವಾರಿಸಲು ಕಠಿಣ ಕಾನೂನಿನ ಅಗತ್ಯವಿದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಆಲ್‌ರೌಂಡರ್ ಕಾರ್ಲೊಸ್ ಬ್ರಾಥ್‌ವೇಟ್ ಹೇಳಿದ್ದಾರೆ.
ಇತ್ತೀಚೆಗೆ ಅಮೆರಿಕನ್ ಜಾರ್ಜ್ ಫ್ಲಾಯ್ಡ್ ಅವರನ್ನು ಶ್ವೇತ ವರ್ಣೀಯ ಪೊಲೀಸರ ಕ್ರೌರ್ಯಕ್ಕೆ ಬಲಿಯಾಗಿದ್ದರು. ಇದು ಅಮೆರಿಕದಾದ್ಯಂತ ಭಾರಿ ಜನಾಕ್ರೋಶಕ್ಕೆ ಕಾರಣವಾಗಿತ್ತು. ಫ್ಲಾಯ್ಡ್ ಸಾವನ್ನು ಖಂಡಿಸಿ ವಿಶ್ವದಾದ್ಯಂತ ಬ್ಲಾಕ್ ಲೈವ್ಸ್ ಮ್ಯಾಟರ್ ಅಭಿಯಾನ ಆಯೋಜಿಸಿದ್ದವು. ಇದಕ್ಕೆ ಕ್ರೀಡಾ ಲೋಕದಿಂದ ಬೆಂಬಲ ವ್ಯಕ್ತವಾಗಿತ್ತು.
ಕ್ರೀಡೆಯಲ್ಲಿ ಕಪ್ಪು ಬ್ಯಾಡ್ಜ್ ಅಥವಾ ತೋಳಿಗೆ ಕಪ್ಪು ಪಟ್ಟಿ ಧರಿಸಿಬಿಟ್ಟರೆ ಇಂತಹ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಮೂಲವಾಗಿ ಕಾನೂನಿನಲ್ಲಿ ಬದಲಾವಣೆಯಾಗಬೇಕು. ಆಗ ಮಾತ್ರ ಇಂತಹ ತಾರತಮ್ಯವನ್ನು ಹೋಗಲು ಸಾಧ್ಯ ಎಂದಿದ್ದಾರೆ.
ಈ ತಿಂಗಳ ಎಂಟರಿಂದ 12ರವರೆಗೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಲಾಕ್ ಲೈವ್ಸ್ ಮ್ಯಾಟರ್ ಲೋಗೊ ಧರಿಸಿ ವೆಸ್ಟ್ ಇಂಡೀಸ್ ತಂಡದ ಆಟಗಾರರು ಆಡಲಿದ್ದಾರೆ.



