ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರ ವರೆಗೆ ಭಾರಿ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರದಿಂದ ಭಾರಿ ಮಳೆಯಾಗಿದೆ. ಈ ಮಳೆ ಜು.7 ವರೆಗೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಶುಕ್ರವಾರ ಹೊನ್ನಾವರದಲ್ಲಿ ಗರಿಷ್ಠ 17 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮಂಗಳೂರು, ಮೂಡುಬಿದಿರೆ 16, ಅಂಕೋಲಾ 13, ಕಾರ್ಕಳ, ಚಿಂಚೋಳಿ 12, ಭಟ್ಕಳ 11, ಉಪ್ಪಿನಂಗಡಿ, ಗೋಕರ್ಣ, ಕಾರವಾರ, ಕುಮಟಾ 10 ಸೆಂ.ಮೀ ಮಳೆಯಾಗಿದೆ.



