ಡಿವಿಜಿ ಸುದ್ದಿ, ದಾವಣಗೆರೆ: ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಮರೋಪಾದಿಯಲ್ಲಿ ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ಒಂದು ನಯಾಪೈಸೆಯ ಅವ್ಯಹಾರ ಆಗಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
100 ಹಾಸಿಗೆಯ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಂತ್ರಿಸಲು ಉತ್ತಮ ರೀತಿಯಲ್ಲಿ ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಯಾವುದೇ ರೀತಿಯ ತನಿಖೆಗೆ ನಾವು ಸಿದ್ದರಿದ್ದೇವೆ ಎಂದರು.
ಮಾನ್ಯ ಮುಖಮಂತ್ರಿಗಳ ನೇತೃತ್ವದಲ್ಲಿ ನಾವೆಲ್ಲ ಒಗ್ಗೂಡಿ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳೂ ಸಹ ನಮ್ಮೊಂದಿಗೆ ದುಡಿಯುತ್ತಿದ್ದಾರೆ. ಆರೋಪ ಮಾಡುವುದಕ್ಕಿಂತ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುವುದು ಒಳಿತು. ಕೋವಿಡ್ ನಿರ್ವಹಣೆ ವಿಷಯವಾಗಿ ವಿಶ್ವವೇ ಭಾರತದ ಕೆಲಸವನ್ನು ಶ್ಲಾಘಿಸುತ್ತಿದೆ ಎಂದರು.



