Connect with us

Dvgsuddi Kannada | online news portal | Kannada news online

ಕೊರೊನಾ ವೈರಸ್ : ಜಗತ್ತಿನ ಅತಿ ಹೆಚ್ಚು ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದ  ಭಾರತ

ಪ್ರಮುಖ ಸುದ್ದಿ

ಕೊರೊನಾ ವೈರಸ್ : ಜಗತ್ತಿನ ಅತಿ ಹೆಚ್ಚು ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದ  ಭಾರತ

ನವದೆಹಲಿ: ಜಗತ್ತಿನಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪತ್ತೆ ಪಟ್ಟಿಯಲ್ಲಿ ರಷ್ಯಾವನ್ನು ಮೀರಿಸಿರುವ ಭಾರತ ಮೂರನೇ ಸ್ಥಾನ ಪಡೆದಿದೆ.

ನಿನ್ನೆ ( ಭಾನುವಾರ) ರಾತ್ರಿ 9 ಗಂಟೆ ಸಮಯಕ್ಕೆ  ದೇಶದಲ್ಲಿ ಪಾಸಿಟಿವ್  ಪ್ರಕರಣಗಳ ಸಂಖ್ಯೆ 6,94,053ಕ್ಕೆ ತಲುಪಿದೆ. ರಷ್ಯಾದಲ್ಲಿ ಒಟ್ಟು ಪಾಸಿಟಿವ್  ಪ್ರಕರಣಗಳ ಸಂಖ್ಯೆ 6,80,283.  ಮೊದಲ ಮತ್ತು ಎರಡನೇ ಸ್ಥಾನದಲ್ಲಿರುವ ಅಮೆರಿಕದಲ್ಲಿ  28.39 ಲಕ್ಷ ಹಾಗೂ ಬ್ರೆಜಿಲ್‌ನಲ್ಲಿ 15.77 ಲಕ್ಷ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ.

ನಿನ್ನೆ ಬೆಳಗ್ಗೆ 8.30ರ ವರೆಗಿನ 24 ತಾಸುಗಳಲ್ಲಿ ದೇಶದಲ್ಲಿ 24,850 ಪಾಸಿಟಿವ್  ಹಾಗೂ 613 ಜನ ಮೃತಪಟ್ಟಿದ್ದರು. ದೇಶದಾದ್ಯಂತ ಈವರೆಗೆ ಮೃತರ ಸಂಖ್ಯೆ 19,268ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಇದೀಗ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚು ಪ್ರಕರಣ ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top