ನವದೆಹಲಿ: ದೇಶದಾದ್ಯಂತ ಕೊರೊನಾ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 24,248 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 425 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಒಟ್ಟು 6,97,413 ಪ್ರಕರಣ ಪತ್ತೆಯಾಗಿದ್ದು, ಜಗತ್ತಿನಲ್ಲಿಯೇ ಸೋಂಕಿತರ ಪಟ್ಟಿಯಲ್ಲಿ 3 ನೇ ಸ್ಥಾನ ಪಡೆದುಕೊಂಡಿದೆ. ಇದರಲ್ಲಿ 4,24,433 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 2,53,287 ಕೇಸ್ ಗಳು ಸಕ್ರಿಯಾಗಿವೆ.
ಇದುವರೆಗೂ ಕೊರೊನಾದಿಂದ 19,693 ಮಂದಿ ಸಾವನ್ನಪ್ಪಿದ್ದಾರೆ. ಪ್ರಪಂಚದಲ್ಲಿ 5 ಲಕ್ಷಕ್ಕೂ ಹೆಚ್ಚು ಜನರು ಕೊರೊನಾಗೆ ಬಲಿಯಾಗಿದ್ದಾರೆ. ವಿಶ್ವದಲ್ಲಿ ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನ ತಲುಪಿದೆ. ಅಮೆರಿಕ ಮತ್ತು ಬ್ರೆಜಿಲ್ ಮೊದಲೆರಡು ಸ್ಥಾನಗಳಲ್ಲಿವೆ. ಅಮೆರಿಕಾದಲ್ಲಿ 29,82,928, ಬ್ರೆಜಿಲ್ ನಲ್ಲಿ 16,04,585 ಮಂದಿಗೆ ಕೊರೊನಾ ಸೋಂಕು ತಗುಲಿದೆ. ರಷ್ಯಾ, ಪೆರು, ಸ್ಪೇನ್ ಕ್ರಮವಾಗಿ 4, 5 ಮತ್ತು 6ನೇ ಸ್ಥಾನದಲ್ಲಿವೆ. ಚೀನಾ 22ನೇ ಸ್ಥಾನದಲ್ಲಿದೆ.



