ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಚಿಕಿತ್ಸೆ ಉಪಕರಣ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕುಳಿತು ದಾಖಲೆ ಪರಿಶೀಲಿಸಲಿ. ಆದರೆ, ದಾಖಲೆ ಇಲ್ಲದೆ ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊನಾರೊನಾ ಚಿಕಿತ್ಸಾ ಉಪಕರಣ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕುಳಿತುಕೊಂಡು ಎಲ್ಲಾ ದಾಖಲೆಗಳನ್ನು ಪರಿಸೀಲಿಸಲಿ. ಅದನ್ನು ಬಿಟ್ಟು ದಾಖಲೆ ರಹಿತವಾಗಿ ಆರೋಪ ಸರಿಯಲ್ಲ.
ದಾಖಲೆ ಪರಿಶೀಲನೆ ನಂತರ ಯಾವುದೇ ರೀತಿಯ ದುರ್ಬಳಕೆ ಕಂಡುಬಂದಲ್ಲಿ ಅಂತಹ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತ್ತೇವೆ. ಆದರೆ, ಈ ರೀತಿ ಸ ದಾಖಲೆ ರಹಿತ ಆರೋಪ ಮಾಡುವುದಕ್ಕಿಂತ ಸೂಕ್ತ ಸಲಹೆ ಸೂಚನೆ ನೀಡಲಿ ಎಂದರು.
ಸಿದ್ದರಾಮಯ್ಯ ಅವರು ಕೊರೊನಾ ಉಪಕರಣ ಖರೀದಿಯಲ್ಲಿ 3 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.



