Connect with us

Dvgsuddi Kannada | online news portal | Kannada news online

ಕರಾವಳಿ, ದಕ್ಷಿಣ ಒಳನಾಡಿನಲ್ಲಿ  ಭಾರೀ ಮಳೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಪ್ರಮುಖ ಸುದ್ದಿ

ಕರಾವಳಿ, ದಕ್ಷಿಣ ಒಳನಾಡಿನಲ್ಲಿ  ಭಾರೀ ಮಳೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ,ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇದೇ 8ರಿಂದ 12ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಸಾಧಾರಣ  ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಿಂದ ವೇಗವಾದ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಜು.9ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top