ಡಿವಿಜಿ ಸುದ್ದಿ,ಬೆಂಗಳೂರು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಕ್‌ಲೈನ್ ವೆಂಕಟೇಶ್ ಅವರನ್ನೂ ಸಹ ತಪಾಸಣೆಗೆ ಒಳಪಡಿಸಲಾಗಿದ್ದು, ಸೋಂಕು ದೃಢಪಟ್ಟಿಲ್ಲ.ಮಂಡ್ಯ ಸಂಸದೆ ಸುಮಲತಾ ಅವರಿಗೆ ಕೊರೊನಾ ದೃಢಪಟ್ಟ ನಂತರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಸೋಂಕು ಇದೆ ಎಂಬ ಸುದ್ದಿ ಹರಡಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್, ತಂದೆಗೆ ಪಾಸಿಟಿವ್ ಬಂದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.



