ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಬಿಐಸಿಇನಲ್ಲಿ 10,100 ಹಾಸಿಗೆಗಳ ಆರೈಕೆ ಕೇಂದ್ರವೂ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೈಗೊಂಡಿರುವ ನಿಯಂತ್ರಣ ಮತ್ತು ನಿರ್ವಹಣಾ ಕ್ರಮವನ್ನು ಕೇಂದ್ರ ಸರ್ಕಾರ ಮೆಚ್ಚಿಕೊಂಡಿದೆ. ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣದಲ್ಲಿದೆ, ಜಿಲ್ಲಾಡಳಿತಗಳಿಗೆ ಎಲ್ಲ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.



