Connect with us

Dvgsuddi Kannada | online news portal | Kannada news online

ಮತ್ತೆ ಲಾಕ್ ಡೌನ್; ಆಯಾ ರಾಜ್ಯಗಳು ನಿರ್ಧರಿಸಲಿವೆ: ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರ ಸುದ್ದಿ

ಮತ್ತೆ ಲಾಕ್ ಡೌನ್; ಆಯಾ ರಾಜ್ಯಗಳು ನಿರ್ಧರಿಸಲಿವೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಾದ್ಯಂತ ತೀವ್ರವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಹಲವು ರಾಜ್ಯ ಸರ್ಕಾರಗಳು ಮತ್ತೆ ಲಾಕ್‌ಡೌನ್‌ ಜಾರಿಗೊಳಿಸಲು ನಿರ್ಧರಿಸಿವೆ. ಈ ಘೋಷಣೆಯನ್ನು  ಆಯಾ ರಾಜ್ಯಗಳು ನಿರ್ಧರಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಒಂದು ವಾರದ ಲಾಕ್‌ಡೌನ್‌ ಘೋಷಣೆಯಾದ ಬೆನ್ನಲ್ಲೇ ಮಹಾರಾಷ್ಟ್ರದ ಪುಣೆ, ಪಿಂಪ್ರಿ–ಚಿಂಚವಾಡ ಹಾಗೂ ಮುಂಬೈ ಮಹಾನಗರದ ಕೆಲವು ಪ್ರದೇಶಗಳಲ್ಲಿಯೂ ಜುಲೈ 13ರಿಂದ ಲಾಕ್‌ಡೌನ್‌ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳ ಬಹುತೇಕ ಭಾಗಗಳಲ್ಲಿ ಜನ ಮನೆಯಿಂದ ಹೊರಬಾರದಂತೆ ನಿರ್ಬಂಧ ವಿಧಿಸಲಾಗಿದೆ.

ದೇಶದಲ್ಲಿ ಶನಿವಾರ ಒಂದೇ ದಿನ   29,113  ಪ್ರಕರಣಗಳು ವರದಿ ಯಾಗಿವೆ. ಈ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರು  ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ನಡೆಸಿ, ದೇಶದ ಸ್ಥಿತಿಗತಿ ಅವಲೋಕಿಸಿದರು. ಪ್ರತಿ ಬೆಳವಣಿಗೆ ಬಗ್ಗೆ ಗಮನಹರಿಸಿ  ಯಾವುದೇ ಲೋಪ-ದೋಷ ಆಗದಂತೆ ನಿಭಾಯಿಸಿ ಎಂದು ಸೂಚನೆ ನೀಡಿದರು.

ಇದೇ ವೇಳೆ ದೆಹಲಿ ಸೇರಿತೆ ಇತರೆ ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತ ಸೋಂಕಿನ ನಿಯಂತ್ರಣಕ್ಕಾಗಿ ನಡೆಸಿರುವ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top