ಡಿವಿಜಿ ಸುದ್ದಿ, ಬೆಂಗಳೂರು: ಮಂಗಳವಾರ ರಾತ್ರಿಯಿಂದ ಬೆಂಗಳೂರು ಲಾಕ್ ಡೌನ್ ಜಾರಿ ಆಗುವುದರಿಂದ ತಮ್ಮ ಊರುಗಳಿಗೆ ಹೋಗುವವರು , ಅಗತ್ಯ ವಸ್ತು ಕೊಳ್ಳುವವರು ಸೋಮವಾರವೇ ಕೊಂಡುಕೊಳ್ಳಿ ಎಂದು ಸಚಿವ ಆರ್ ಅಶೋಕ್ ಹೇಳಿದರು.
ಮಾರ್ಗಸೂಚಿ ಬಗ್ಗೆ ಮುಖ್ಯ ಕಾರ್ಯದರ್ಶಿ ಜೊತೆ ಮುಖ್ಯಮಂತ್ರಿ ಮಾತನಾಡಿದ್ದಾರೆ. ನಾಳೆ ಮಾರ್ಗಸೂಚಿ ಬಿಡುಗಡೆ ಆಗಲಿದೆ ಎಂದರು.
ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅಧಿಕಾರಿಗಳ ಜೊತೆ ಭಾನುವಾರ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದರು, ಲಾಕ್‌ಡೌನ್ ಅವಧಿಯಲ್ಲಿ ವೈದ್ಯಕೀಯ ಸಂಬಂಧಿತ ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಕೊರೊನಾ ಚೈನ್ ಬ್ರೇಕ್ ಮಾಡಲು ಲಾಕ್ ಡೌನ್ ಘೋಷಿಸಲಾಗಿದೆ. ಜನಸಾಮಾನ್ಯರಿಗೆ ತೊಂದರೆ ಆಗದಿರಲಿ, ಅಗತ್ಯ ವಸ್ತುಕೊಳ್ಳಲು, ಊರುಗಳಿಗೆ ಹೋಗುವರಿಗೆ ಅನುಕೂಲ ಆಗಲಿ ಎಂದು ಸೋಮವಾರ ಬಿಡುವು ನೀಡಲಾಗಿದೆ ಎಂದು ತಿಳಿಸಿದರು.
ಸೋಂಕು ಹರಡುವಿಕೆ ನೋಡಿಕೊಂಡು ವಿಸ್ತರಣೆ ಮಾಡಬೇಕೊ ಅಥವಾ ಬೇಡವೊ ಎಂದು ನಂತರ ನಿರ್ಧರಿಸುತ್ತೇವೆ. ತಜ್ಞರ ವರದಿ ಪಡೆದು ಎರಡು ದಿನ ಮೊದಲೇ ತಿಳಿಸುತ್ತೇವೆ ಎಂದರು.



