ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು 2,627 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, 693 ಮಂದಿ ಗುಣಮುಖರಾಗಿದ್ದಾರೆ. 71 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 38,843 ತಲುಪಿದ್ದು,ಒಟ್ಟು 684 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸೋಂಕಿನಿಂದ 15,409 ಮಂದಿ ಗುಣಮುಖರಾಗಿದ್ದಾರೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು 1,525 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ದಕ್ಷಿಣ ಕನ್ನಡದಲ್ಲಿ 196, ಧಾರವಾಡದಲ್ಲಿ 129, ಯಾದಗಿರಿಯಲ್ಲಿ 120 ಪತ್ತೆಯಾಗಿವೆ.



