ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿಂದು 20 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಮೂರು ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 534ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾದಿಂದ ಗುಣಮುಖರಾದ 66ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 410 ಜನ ಬಿಡುಗಡೆಯಾಗಿದ್ದು, ಇನ್ನು 104 ಸಕ್ರಿಯ ಪ್ರಕರಣಗಳಿವೆ.
ಇಂದು ಪತ್ತೆಯಾದ 20 ಕೊರೊನಾ ಪಾಸಿಟಿವ್ ಕೇಸ್ ಗಳಲ್ಲಿ ದಾವಣಗೆರೆ ಯಲ್ಲಿ 14 , ಹರಿಹರ 2, ಹೊನ್ನಾಳಿ 2, ಜಗಳೂರು 02 ಪತ್ತೆಯಾಗಿವೆ.



