ಡಿವಿಜಿಸುದ್ದಿ.ಕಾಂ, ಹೊಸದಿಲ್ಲಿ: ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಇನ್ನು ಡಿ.ಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿಯೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.
ಮೂರು ದಿನಗಳ ಕಾಲ ನಡೆದ ವಾದ-ಪ್ರತಿವಾದ ಅಂತ್ಯಗೊಂಡ ನಂತರ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಡಿಕೆಶಿಗೆ ಜಾಮೀನು ನಿರಾಕರಿಸಿದೆ. ಒಂದೇ ವ್ಯಾಕ್ಯದಲ್ಲಿ ಆದೇಶ ನೀಡಿದ ನ್ಯಾಯಧೀಶರು, ಜಾಮೀನು ನೀಡಲು ನಿರಾಕರಿಸಿದರು. ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅರ್ಜಿ ವಿಚಾರಣೆ ನಡೆಸುತ್ತಿದ್ದರು.
ಜಾಮೀನು ಅರ್ಜಿ ತಿರಸ್ಕರಿಸಿದ್ದರಿಂದ ಡಿ.ಕೆ. ಶಿವಕುಮಾರ್ ನಾಳೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.