Connect with us

Dvgsuddi Kannada | online news portal | Kannada news online

ಪಿಯುಸಿ ಫಲಿತಾಂಶ ಪ್ರಕಟ:  ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ; ಶೇ. 61.80 ರಷ್ಟು ಫಲಿತಾಂಶ

ರಾಜ್ಯ ಸುದ್ದಿ

ಪಿಯುಸಿ ಫಲಿತಾಂಶ ಪ್ರಕಟ:  ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ; ಶೇ. 61.80 ರಷ್ಟು ಫಲಿತಾಂಶ

ಡಿವಿಜಿ ಸುದ್ದಿ, ಬೆಂಗಳೂರು:  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಪ್ರಥಮ,  ದಕ್ಷಿಣ ಕನ್ನಡ ದ್ವಿತೀಯ ಹಾಗೂ  ಕೊಡಗು ತೃತೀಯ ಸ್ಥಾನ ಪಡೆದಿದೆ. ಒಟ್ಟಾರೆ 61.80 ರಷ್ಟು ಫಲಿತಾಂಶ ಬಂದಿದೆ.

ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್   ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದರು. ಮಾರ್ಚ್‌ 4ರಿಂದ 21ರವರೆಗೆ ಪರೀಕ್ಷೆ ನಡೆದಿತ್ತು. ಈ ನಡುವೆ ಲಾಕ್‌ಡೌನ್‌ ಜಾರಿಯಾದ ಹಿನ್ನೆಲೆ ಮುಂದೂಡಲಾಗಿದ್ದ ಇಂಗ್ಲಿಷ್‌ ಪರೀಕ್ಷೆಯನ್ನು ಜೂನ್‌ 18ರಂದು ನಡೆಸಲಾಗಿತ್ತು.

1092905952059846307701737557827672179531981n1594709276

ಒಟ್ಟು 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,17,297 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು ಶೇ 61.80ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇಕಡ 68.68 ರಷ್ಟಿತ್ತು. ಈ ಬಾರಿ ಬಾಲಕಿ.ಯರು ಶೇ 68.73, ಬಾಲಕರು ಶೇ 54.77ರ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಕೊನೆಯ ಮೂರು ಸ್ಥಾನ ಪಡೆದಿವೆ. ಕಾರ್ಕಳದ ಶಿರ್ಲಾಲು ಗ್ರಾಮದ ವಿದ್ಯಾರ್ಥಿನಿ ನೂರಕ್ಕೆ ಶೇ.100 ಫಲಿತಾಂಶ ಪಡೆದಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top