ಡಿವಿಜಿ ಸುದ್ದಿ, ಚಿಕ್ಕೋಡಿ: ಕೊರೊನಾ ಎಫೆಕ್ಟ್ ನಿಂದ ಮದುವೆ ಸಮಾರಂಭಗಳಿಗೆ ಸರ್ಕಾರ ನಿಷೇಧ ಹೇರಿದರೂ, ಮಗನ ಅದ್ಧೂರಿ ಮದುವೆ ಮಾಡಿದ್ದಕ್ಕೆ ಬಿಜೆಪಿ ಮುಖಂಡನಿಗೆ ಮೇಲೆ ಎಫ್ ಐಆರ್ ದಾಖಲಾಗಿದೆ.
ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅದ್ಧೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು, ಅದ್ಧೂರಿ ಮದುವೆ ಮಾಡುವವರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದ ಬಿಜೆಪಿ ಮುಖಂಡ ದಯಾನಂದ ವಂಟಮುರಿ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಸೋಮವಾರ ಮಗನ ಮದುವೆ ಮಾಡದ್ದು , ಮಹಾರಾಷ್ಟ್ರದಿಂದ ಸಾಕಷ್ಟು ಜನರನ್ನು ಮದುವೆಗೆ ಕರೆಯಿಸಿದ್ದರು. ಗ್ರಾಮದಲ್ಲಿ ವಧು-ವರನ ಅದ್ಧೂರಿ ಮೆರವಣಿಗೆ ಮಾಡಿದ್ದರಿಂದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
500ಕ್ಕೂ ಹೆಚ್ಚು ಜನ ಸೇರಿಸಿ, ಮಾಸ್ಕ್ ಬಳಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್-19 ನಿಯಮವನ್ನು ಉಲ್ಲಂಘಿಸಿದ್ದಾನೆ. ಐಪಿಸಿ ಸೆಕ್ಷನ್ 188, 269, 270, ಎಪಿಡೆಮಿಕ್ ಡಿಸೀಸ್ ಕಾಯ್ದೆ, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಶಿವಾನಂದ ಗುಡಗನಟ್ಟಿ ಪ್ರಕರಣ ದಾಖಲಿಸಿದ್ದಾರೆ.



