ಡಿವಿಜಿ ಸುದ್ದಿ, ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಹಾಗೂ ಕಂಟೈನ್ಮೆಂಟ್ ವಲಯಗಳಲ್ಲಿ ಬಡವರಿಗೆ ಸೂಕ್ ಆಹಾರದ ಕಿಟ್ ವಿತರಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ವಿವರಣೆ ನೀಡಲು ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಯುಕ್ತರು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕು ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಹೇಳಿದೆ.
ಕೊರೊನಾ ನಿಯಂತ್ರಣದಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಕಿಡಿ ಕಾರಿರುವ ನ್ಯಾಯಪೀಠ, ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮಾರ್ಗಸೂಚಿ ಜಾರಿ ಮಾಡುವ ಹಾಗೂ ನಿರ್ಗತಿಕರಿಗೆ ಆಹಾರ ಕಿಟ್ ವಿವರಿಸುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜೂನ್ 25 ಮತ್ತು ಜುಲೈ 9ರಂದು ನೀಡಿರುವ ಆದೇಶ ಪಾಲನೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.



