ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 2,496 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 87 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು 44,077 ಮಂದಿಗೆ ಸೋಂಕು ಪತ್ತೆಯಾದಂತಾಗಿದೆ. ಸೋಂಕಿನಿಂದ 842 ಮಂದಿ ಮೃತಪಟ್ಟಿದ್ದಾರೆ. 1,142 ಜನರು ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 17,390 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇನ್ನು 25,839 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 540 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ 1,267 ಕೊರೊನಾ ಪತ್ತೆಯಾಗಿದ್ದು, 664 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 4,992 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, 21 ಸಾವಿರದತ್ತ ತಲುಪುತ್ತಿದೆ. ಒಂದೇ ದಿನ 56 ಜನರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
ಮೈಸೂರಿನಲ್ಲಿ125, ಕಲಬುರಗಿ 121, ಧಾರವಾಡ 100, ಬಳ್ಳಾರಿ 99, ಕೊಪ್ಪಳ 98, ದಕ್ಷಿಣ ಕನ್ನಡ 91, ಬಾಗಲಕೋಟೆ 78, ಉಡುಪಿ 73, ಉತ್ತರ ಕನ್ನಡ 64, ಬೆಳಗಾವಿ 64, ವಿಜಯಪುರ 52, ತುಮಕೂರು 47, ಬೀದರ್ 42, ಮಂಡ್ಯ 38, ರಾಯಚೂರು 25, ದಾವಣಗೆರೆ 17, ಬೆಂಗಳೂರು ಗ್ರಾಮಾಂತರ 14, ಚಿಕ್ಕಬಳ್ಳಾಪುರ 13, ಕೋಲಾರ 11, ಶಿವಮೊಗ್ಗ 10, ಗದಗ 9, ಚಾಮರಾಜನಗರ 8, ಹಾಸನ 4, ಚಿಕ್ಕಮಗಳೂರು 3, ಯಾದಗಿರಿ 2 ಮತ್ತು ರಾಮನಗರದಲ್ಲಿ ಒಂದು ಪಾಸಿಟಿವ್ ಪತ್ತೆಯಾಗಿದೆ.



