ನವದೆಹಲಿ: ದೇಶದಾದ್ಯಂತ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರಿದಿದ್ದು, ಇಂದು 29,429 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ 582 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ. 5,92,032 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾದಿಂದ 24,309 ಮಂದಿ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 3,19,840 ಸಕ್ರಿಯ ಪ್ರಕರಣಗಳಿವೆ.
ಇಡೀ ದೇಶದಲ್ಲಿ ಅತಿ ಹೆಚ್ಚು ಮಹಾರಾಷ್ಟ್ರದಲ್ಲಿ 2.61 ಲಕ್ಷ ಮಂದಿಗೆ ಸೋಂಕು ತಗುಲಿದೆ. 1.45 ಲಕ್ಷ ಮಂದಿ ಗುಣಮುಖರಾಗಿದ್ದು, 10,482 ಮಂದಿ ಮೃತಪಟ್ಟಿದ್ದಾರೆ.ತಮಿಳುನಾಡಿನಲ್ಲಿ 1.43 ಲಕ್ಷ ಮಂದಿಗೆ ಸೋಂಕು ತಗುಲಿದೆ. 92,567 ಮಂದಿ ಗುಣಮುಖರಾಗಿದ್ದು, 2, 032 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ 1.14 ಲಕ್ಷ ಜನರಿಗೆ ಸೋಂಕು ತಗುಲಿದೆ. 91, 312 ಮಂದಿ ಚೇತರಿಸಿಕೊಂಡಿದ್ದು, 3,411 ಮಂದಿ ಪ್ರಾಣ ಬಿಟ್ಟಿದ್ದಾರೆ.



