ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲಿ ಪರಿಣಾಮಕಾರಿಯಾಗಿ ಕೊರೊನಾ ನಿಯಂತ್ರಣ ಮಾಡಿ; ಬೈರತಿ ಬಸವರಾಜ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕೋವಿಡ್ ನಿಯಂತ್ರಣ ಕಾರ್ಯ ಕೈಗೊಳ್ಳಬೇಕು. ಜೊತೆಗೆ ಸ್ವಚ್ಚತೆ ಮತ್ತು ಅಭಿವೃದ್ದಿ ಕಡೆ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿಗಳು, ಸಿಇಓ, ಎಸ್‍ಪಿ, ಪಾಲಿಕೆ ಆಯುಕ್ತರಿಗೆ ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ಸೂಚಿಸಿದರು.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ. ಇನ್ನೂ ಹೆಚ್ಚಿನ ರೀತಿಯಲ್ಲಿ, ಪರಿಣಾಮಕಾರಿಯಾಗಿ ಕಟ್ಟೆಚ್ಚರ ವಹಿಸಿ ಕಾರ್ಯೋನ್ಮುಖರಾಗಬೇಕು. ಮನೆ ಮನೆ ಸರ್ವೇ ಕಾರ್ಯ ಹೆಚ್ಚಿಸಬೇಕು ಎಂದು ಸೂಚಿಸಿದರು.

ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಟಾಸ್ಕ್‍ಫೋರ್ಸ್ ಸಮಿತಿಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು. ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದು ಕೋವಿಡ್ ನಿಯಂತ್ರಿಸಬೇಕು. ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಆರಂಭಿಸಬೇಕು ಎಂದು ಸೂಚನೆ ನೀಡಿದರು.

ministere meeting

ದಾವಣಗೆರೆಯಲ್ಲಿ ಎರಡು ಮೆಡಿಕಲ್ ಕಾಲೇಜುಗಳು, ಉತ್ತಮ ಆಸ್ಪತ್ರೆಗಳಿದ್ದರೂ ಮರಣ ಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಿದೆ. ರಾಜ್ಯದ ಪ್ರಮಾಣ ಶೇ.2.1 ರಷ್ಟಿದ್ದರೆ ಜಿಲ್ಲೆಯಲ್ಲಿ ಮರಣ ಪ್ರಮಾಣ ಶೇ.3.63 ಇದೆ. ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ತಗ್ಗಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದರು.

ತಾಲ್ಲೂಕು ಭೇಟಿ ನೀಡಿ : ಡಿಸಿ, ಸಿಇಓ ಮತ್ತು ಎಸ್‍ಪಿ ತಂಡ ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚೆಚ್ಚು ಗುಂಪು ಸೇರದಂತೆ ಎಸ್‍ಪಿ ಯವರು ಕ್ರಮ ವಹಿಸಬೇಕು. ಸಾಮಾಜಿಕ ಅಂತರ ಕಾಪಾಡುವಂತೆ ಕ್ರಮ ಜರುಗಿಸಬೇಕು. ಜಿ ಪಂ ಸಿಇಓ ಗ್ರಾಮೀಣ ಭಾಗದಲ್ಲಿ ಟಾಸ್ಕ್‍ಫೋರ್ಸ್ ಸಮಿತಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕೋವಿಡ್ ನಿಯಂತ್ರಣದಲ್ಲಿ ಮುಖ್ಯ ಪಾತ್ರ ವಹಿಸಬೇಕು. ಒಟ್ಟಾರೆಯಾಗಿ ಕಂಟೈನ್‍ಮೆಂಟ್ ವಲಯಗಳಲ್ಲಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಮೂಲಕ ಬೇರೆಡೆ ರೋಗ ಹರಡಂತೆ ಕ್ರಮ ವಹಿಸಬೇಕು ಎಂದ ಅವರು ಯಾವುದೇ ಕಾರಣಕ್ಕೂ ಮೈಮರೆಯದೇ ಕೋವಿಡ್‍ನ್ನು ಎದುರಿಸಬಲು ಸನ್ನದ್ದರಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ , ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.3.3 ರಷ್ಟಿದೆ. ಇದುವರೆಗೆ ಒಟ್ಟು 35952 ಸ್ವಾಬ್ ಸಂಗ್ರಹಿಸಿ ಪರೀಕ್ಷಿಸಿದ್ದು 31648 ನೆಗೆಟಿವ್ ವರದಿ ಬಂದಿದೆ. ಫಲಿತಾಂಶ ಬರುವುದು ಬಾಕಿ 2997 ಇದೆ. ಇದುವರೆಗೆ 29 ಮರಣ ಸಂಭವಿಸಿದ್ದು ಇದರಲ್ಲಿ 5 ಹೊರ ಜಿಲ್ಲೆಯವರಾಗಿದ್ದಾರೆ. ಕೇವಲ ಒಂದು ಪ್ರಕರಣ ಮಾತ್ರ ಕೋವಿಡ್ ಮರಣವಾಗಿದ್ದು ಉಳಿದ ಪ್ರಕರಣಗಳು ಕೋಮಾರ್ಬಿಡಿಟಿ ಇರುವಂತಹವಾಗಿವೆ.

ಇದುವರೆಗೆ 807 ಪ್ರಕರಣಗಳು ದೃಢಪಟ್ಟಿದ್ದು, ಪ್ರಸ್ತುತ 207 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 225 ಕಂಟೈನ್‍ಮೆಂಟ್ ವಲಯಗಳನ್ನು ಸ್ಥಾಪಿಸಿದ್ದು 64 ವಲಯಗಳನ್ನು ಡಿನೋಟಿಫೈ ಮಾಡಲಾಗಿದೆ. 162 ಸಕ್ರಿಯ ವಲಯಗಳಿವೆ. ಸಿಜಿ ಆಸ್ಪತ್ರೆಯಲ್ಲಿ 140 ಬೆಡ್‍ಗಳ ಐಸೋಲೇಷನ್ ವಾರ್ಡ್‍ಗಳಲ್ಲಿ ಚಿಕಿತ್ಸೆ ನಡೆಯುತ್ತಿದ್ದು. 7 ಜನರು ವೆಂಟಿಲೇಟರ್ ಮೇಲೆ ಅವಲಂಬಿತರಾಗಿದ್ದರೆ 12 ಜನರು ಹೈಫ್ಲೋ ನ್ಯಾಸಲ್ ಆಕ್ಸಿಜನ್ ಪೂರೈಕೆಯಲ್ಲಿದ್ದಾರೆ.

ಬಾಪೂಜಿ ಆಸ್ಪತ್ರೆಯಲ್ಲಿ ಒಬ್ಬರು ವೆಂಟಿಲೇಟರ್ ಅವಲಂಬಿತರಿದ್ದಾರೆ. ಎಸ್‍ಎಸ್ ಆಸ್ಪತ್ರೆಯಲ್ಲಿ 24 ಜನರು ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು ಸಿಇಓ ಮುಂದಾಳತ್ವದಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ. ಜಿಲ್ಲೆಗೆ 1000 ರ್ಯಾಪಿಡ್ ಆಂಟಿಜೆನ್ ಕಿಟ್‍ಗಳು ಬಂದಿದ್ದು ಇದರ ಬಳಕೆ ಕುರಿತು ಜು.18 ರಂದು ತರಬೇತಿ ನೀಡಲಾಗಿದೆ. ಕಳೆದ ಒಂದು ವಾರದಲ್ಲಿ 5 ರಿಂದ 6 ಮರಣ ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ತಜ್ಞರನ್ನೊಳಗೊಂಡ ಮರಣ ಆಡಿಟ್ ಸಮಿತಿ ರಚಿಸಿ ವಿಶ್ಲೇಷಣೆ ನಡೆಸಲಾಗಿದೆ.

ಹೈ ಡೆತ್ ಪಾಕೆಟ್ಸ್‍ಗನ್ನು ಗುರುತಿಸಿ ತಂಡಗಳನ್ನು ರಚಿಸಿ ಸರ್ವೇ ಕಾರ್ಯ, ಸ್ವಾಬ್ ಪರೀಕ್ಷೆ ನಡೆಸಲಾಗುತ್ತಿದೆ. ಕೆಪಿಎಂಇ ಅಡಿಯಲ್ಲಿ ನೊಂದಾಯಿತವಾದ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳಿಂದ ರೆಫರ್ ಆಗುವ ಐಎಲ್‍ಐ ಮತ್ತು ಎಸ್‍ಎಆರ್‍ಐ ಪ್ರಕರಣಗಳ ಸ್ವಾಬ್ ಪರೀಕ್ಷೆ ನಡೆಸಲಾಗುತ್ತಿದೆ. ಈ ಕಾರಣಕ್ಕಾಗಿ ತಾಲ್ಲೂಕುಗಳಲ್ಲಿ ಮೊಬೈಲ್ ತಂಡಗಳನ್ನು ರಚಿಸಲಾಗಿದ್ದು ಪಿಹೆಚ್‍ಸಿ, ಸಿಹೆಚ್‍ಸಿ ಗಳಲ್ಲಿ ಸ್ವಾಬ್ ಸಂಗ್ರಹ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಎಸಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್‍ಓ ಡಾ. ರಾಘವೇಂದ್ರಸ್ವಾಮಿ, ಡಿಎಸ್‍ಓ ಡಾ.ರಾಘವನ್, ಡಿಎಸ್ ಡಾ.ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಜರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *