ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಇಂದು ದಾಖಲೆಯ 4,764 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. 55 ಸೋಂಕಿತರು ಮೃತಪಟ್ಟಿದ್ದು, ಒಟ್ಟು 1,780 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 75,833 ಮಂದಿಗೆ ಸೋಂಕು ತಗುಲಿದ್ದು, 47,069 ಸಕ್ರಿಯ ಪ್ರಕರಣಗಳಿವೆ. 27,239 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,519 ಮಂದಿ ಮೃತಪಟ್ಟಿದ್ದಾರೆ. 618 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ 812, ಬೀದರ್ 186, ಧಾರವಾಡ 135, ಉತ್ತರ ಕನ್ನಡ 96, ಚಿಕ್ಕಬಳ್ಳಾಪುರ 92 ಮಂದಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು 2,050 ಮಂದಿಗೆ ಸೋಂಕು ತಗುಲಿದ್ದು, 15 ಮಂದಿ ಮೃತಪಟ್ಟಿದ್ದಾರೆ. ಉಡುಪಿಯಲ್ಲಿ 281, ಬೆಳಗಾವಿಯಲ್ಲಿ 219, ಕಲಬುರಗಿಯಲ್ಲಿ 175, ದಕ್ಷಿಣ ಕನ್ನಡದಲ್ಲಿ 162 ಮಂದಿಗೆ ಸೋಂಕು ದೃಢಪಟ್ಟಿದೆ. ಕರ್ನಾಟಕದಲ್ಲಿ ಚೇತರಿಕೆ ಪ್ರಮಾಣ ಶೇ.35.92 ಇದ್ದರೆ ಮರಣ ಪ್ರಮಾಣ ಶೇ.2 ರಷ್ಟಿದೆ.

ಬೆಂಗಳೂರಿನಲ್ಲಿ ಇಂದು 2,050 ಸೇರಿ ಒಟ್ಟು 36,993 ಮಂದಿಗೆ ಸೋಂಕು ಬಂದಿದೆ. ಇಂದು 812 ಮಂದಿ ಬಿಡುಗಡೆಯಾಗಿದ್ದು ಒಟ್ಟು 8,288 ಬಿಡುಗಡೆಯಾಗಿದ್ದಾರೆ. 27,969 ಸಕ್ರಿಯ ಪ್ರಕರಣಗಳಿದ್ದು ಒಟ್ಟು 735 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.



