ಡಿವಿಜಿ ಸುದ್ದಿ.ಕಾಂ, ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಸೆ. 26 ರಂದು 17.82 ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 18.08 ಎಂ.ಎಂ ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 5.5 ಎಂ.ಎಂ ಹೊನ್ನಾಳಿ ತಾಲ್ಲೂಕಿನಲ್ಲಿ 8.2 ಎಂ.ಎಂ, ಚನ್ನಗಿರಿ 10.61 ಎಂ.ಎಂ ಹಾಗೂ ಜಗಳೂರು ತಾಲ್ಲೂಕಿನಲ್ಲಿ 46.74 ಎಂ.ಎಂ ಮಳೆಯಾಗಿದ್ದು, ಒಟ್ಟಾರೆ ಜಿಲ್ಲೆಯಲ್ಲಿ ಸರಾಸರಿ 17.82 ಎಂ.ಎಂ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ. 15,000 ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆಗಳು ಮತ್ತು ಹರಿಹರ ತಾಲ್ಲೂಕಿನ 1 ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ. 55,432 ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟು ಅಂದಾಜು ರೂ. 70,432 ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮವಹಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.