ಡಿವಿಜಿ ಸುದ್ದಿ, ಚನ್ನಗಿರಿ: ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರೇಲರ್ ಗಳಿಗೆ ಡಿಕ್ಕಿ ಹೊಡೆದು ಅಫಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು , ಈ ಹಿನ್ನೆಲೆಯಲ್ಲಿ ಇನ್ಮುಂದೆ ಟ್ರೇಲರ್ ಗಳಿಗೆ ರಿಫ್ಲೆಕ್ಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಚನ್ನಗಿರಿಯಲ್ಲಿ ಟ್ರ್ಯಾಕ್ಟರ್ ಟ್ರೇಲರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿದ್ದಾರೆ .
ಹೀಗಾಗಿ ಟ್ರ್ಯಾಕ್ಟರ್ ಮಾಲೀಕರು ಕಡ್ಡಾಯವಾಗಿ ರಿಫ್ಲೆಕ್ಟರ್ ಅಳವಡಿಸಿಕೊಳ್ಳಬೇಕು ಜೊತೆ ಟೇಪ್ ರೆಕಾರ್ಡರ್ ಗಳನ್ನು ತಗೆದುಹಾಕಬೇಕು. ಈ ಬಗ್ಗೆ ಟ್ರ್ಯಾಕ್ಟರ್ ಡ್ರೇಲರ್ ತಯಾರಿಕಾ ಸಂಸ್ಥೆ ಮಾಲೀಕರ ಸಭೆ ಕರೆದು ಸೂಚನೆ ನೀಡಲಾಗವುದು.
ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ರಚನೆ ಮಾಡಲಾಗುವುದು ಎಂದು ತಿಳಿಸಿದರು.



