ಡಿವಿಜಿ ಸುದ್ದಿ, ಮಡಿಕೇರಿ: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ವಿಪಕ್ಷಗಳ ಆರೋಪ ಸತ್ಯಾಸತ್ಯತೆ ತಿಳಿಯಲು ಸರ್ಕಾರ ಈ ಪ್ರಕರಣವನ್ನು ಧೈರ್ಯವಾಗಿ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಎಂ.ಪಿ.ಅಪ್ಪಚ್ಚು ಆಗ್ರಹಿಸಿದರು.
ವಿರೋಧ ಪಕ್ಷದ ಮುಖಂಡರು ಆರೋಪ ಮಾಡಿದಾಗ ಆಡಳಿತ ಪಕ್ಷದ ಸರಿಯಾದ ದಾಖಲೆಗಳನ್ನು ಜನರ ಎದುರು ಇಡಬೇಕು. ಕೆಲವು ದಾಖಲೆಗಳನ್ನು ಕೊಟ್ಟಿದ್ದಾರೆ. ವಿರೋಧ ಪಕ್ಷಗಳು ಸಹ ಸರಿಯಾದ ದಾಖಲೆಗಳೊಂದಿಗೆ ಆರೋಪ ಮಾಡಬೇಕು ಎಂದರು.
ಸರ್ಕಾರ 600 ಕೋಟಿಯಷ್ಟು ಮಾತ್ರ ಹಣ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದವರು 4,000 ಕೋಟಿಯಷ್ಟು ಖರ್ಚಾಗಿದೆ ಹೇಳುತ್ತಿದ್ದಾರೆ. ಈ ಪ್ರಕರಣದರ ಸತ್ಯಾಸತ್ಯತೆ ಅರಿಯಲು ತನಿಖೆ ಅಗತ್ಯವಾಗಿದೆ. ನ್ಯಾಯಾಂಗ ತನಿಖೆ ಸೇರಿದಂತೆ ಯಾವುದಾದರು ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದು ಹೇಳಿದರು.
ಕೊರೊನಾ ಸಂಕಷ್ಟದ ಸಮಯದಲ್ಲಿ ಹಣ ದುರುಪಯೋಗ ನಡೆದಿದ್ದರೆ, ಅವ್ಯವಹಾರದಲ್ಲಿ ಭಾಗಿಯಾದವರನ್ನು ನೇಣಿಗೆ ಹಾಕುಬೇಕು. ಆದರೆ, ನನಗೆ ಗೊತ್ತಿರುವ ಮಟ್ಟಿಗೆ ಯಾವುದೇ ಅವ್ಯವಹಾರ ನಡೆದಿಲ್ಲ. ಯಾರೇ ಆರೋಪ ಮಾಡಿದರೂ ತನಿಖೆ ಮಾಡುವುದು ಸಹಜ ಎಂದು ತಿಳಿಸಿದರು.



