ಡಿವಿಜಿ ಸುದ್ದಿ.ಕಾಂ, ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೆ.29 ರಂದು ದಾವಣಗೆರೆ ನಗರಕ್ಕೆ ಆಗಮಿಸಲಿದ್ದಾರೆ. ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಿರುವ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಸಂಜೆ 5.15 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆಯ ಜಿ.ಎಂ.ಐ.ಟಿ ಹೆಲಿಪ್ಯಾಡ್ ತಲುಪಿ, ಸಂಜೆ 6.30ಕ್ಕೆ ನಂತರ ಹಳೆ ಕುಂದವಾಡದಲ್ಲಿರುವ ಶ್ರೀ ಸದ್ಗುರು ಕರಿಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು. ನಂತರ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ ಭಾಗಿಯಾಗಿ ರಾತ್ರಿ 09 ಗಂಟೆಗೆ ದಾವಣಗೆರೆಯಿಂದ ರಸ್ತೆ ಮೂಲಕ ಬೆಂಗಳೂರಿಗೆ ತೆರಳುವರು.
ಒಳ್ಳೆ ಸುದ್ದಿಗಳು ಬರುತ್ತಿವೆ ಇದೇ ರೀತಿ ನಿರಂತರವಾಗಿರಲಿ