ಡಿವಿಜಿ ಸುದ್ದಿ, ಬೆಂಗಳೂರು: ಇಂದು ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದ್ದು, ನಾಳೆಯಿಂದ (ಜು. 26 ) ಮೂರು ದಿನಗಳ ಕಾಲ ಮಳೆಯ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉತ್ತರ , ದಕ್ಷಿಣ ಒಳನಾಡಿ ಬಹುತೇಕ ಜಿಲ್ಲೆಯಲ್ಲಿ ನಾಳೆಯಿಂದ ಮಳೆಯ ಪ್ರಮಾಣ ತಗ್ಗಲಿದೆ.
ಕೆಲವೊಂದು ಪ್ರದೇಶದಲ್ಲಿ ಮಾತ್ರ ಮಳೆಯಾಗಲಿದೆ. ಆದರೆ, ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ.