ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಬಿ.ಜೆ ಅಜಯ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅವರ ಜೊತೆ ಪತ್ರಿ, ಪುತ್ರನಿಗೂ ಸೋಂಕು ಪತ್ತೆಯಾಗಿದೆ. ಆದರೆ, ಪುತ್ರಿಗೆ ಕೊರೊನಾ ನೆಗೆಟಿವ್ ಬಂದಿದೆ.
ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ಮೇಯರ್ ವಾಸವಿದ್ದು, ಅವರ ಸಂಪರ್ಕದಲ್ಲಿರುವ 50 ಕ್ಕೂ ಹೆಚ್ಚು ಜನರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದಾರೆ.
ಎಲ್ಲ ಕಡೆ ಕೊರೊನಾ ಸೋಂಕು ಹರಡುತ್ತಿದ್ದು, ಸಾವರ್ಜನಿಕರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನನ್ನ ಜೊತೆ ಸಂಪರ್ಕದಲ್ಲಿದ್ದ 50ಕ್ಕೂ ಹೆಚ್ಚು ಜನರನ್ನು ನಮ್ಮ ಮನೆಯಲ್ಲಿ ತಪಾಸಣೆ ನಡೆಯುತ್ತಿದೆ. ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೂಡಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ಮೇಯರ್ ಅಜಯ್ ಕುಮಾರ್ ಹೇಳಿದ್ದಾರೆ.