Connect with us

Dvgsuddi Kannada | online news portal | Kannada news online

ಬೆಳ್ಳಂ ಬೆಳಗ್ಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಸಾವು

ಪ್ರಮುಖ ಸುದ್ದಿ

ಬೆಳ್ಳಂ ಬೆಳಗ್ಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಸಾವು

 ಡಿವಿಜಿ ಸುದ್ದಿ, ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್ ಗೆ  ಬಂದಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಆರ್.ಟಿ ನಗರದಲ್ಲಿ ನಡೆದಿದೆ.

ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದು,  ಬಿಬಿಎಂಪಿಗೆ ಬಹುದೊಡ್ಡ ಸವಾಲಾಗಿದೆ. ಅದರಲ್ಲೂ ಈ ರೀತಿಯ ಸಾವಿನ ಪ್ರಕರಣಗಳು ಆರೋಗ್ಯ ಇಲಾಖೆ ಸಿಬ್ಬಂದಿಗೆ ತಲೆನೋವಾಗಿ ಬದಲಾಗುತ್ತಿವೆ.

ಆರ್.ಟಿ ನಗರದ ಪಾರ್ಕಿನಲ್ಲಿ ವ್ಯಕ್ತಿ ಸಾವನ್ನಪ್ಪಿದ್ದು, ಮೃತ ವ್ಯಕ್ತಿ ಯಾರು ಎಂಬ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಆದರೆ ಪಾರ್ಕಿನಲ್ಲಿ ವ್ಯಕ್ತಿ ಹೇಗೆ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕೊರೊನಾ ಭಯದ ಕಾರಣ ಸಾರ್ವಜನಿಕರು ವ್ಯಕ್ತಿ ಕುಸಿದು ಬಿದ್ದರೂ ಯಾರು ವ್ಯಕ್ತಿಯ ಬಳಿ ತೆರಳಿ ಸಹಾಯ ಮಾಡಲು ಮುಂದಾಗಿಲ್ಲ ಎನ್ನಲಾಗಿದೆ. ಬಳಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೃತದೇಹವನ್ನು ಕೊಂಡೊಯ್ದಿದ್ದಾರೆ. ಸದ್ಯ ಮೃತ ದೇಹದ ಕೊರೊನಾ ಪರೀಕ್ಷೆ ನಡೆದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top