ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ದುರ್ಬಲವಾಗಿದ್ದ ಮಳೆ ಜು.28 ರಿಂದ 31 ವರೆಗೆ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜು. 28 ರಿಂದ ಉತ್ತರ, ದಕ್ಷಿಣ ಹಾಗೂ ಕರಾವಳಿ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಜು.28 ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಭಾರಿ ಮಳೆಯಾಗಲಿದೆ.
29 ರಂದು ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜು. 31 ರಂದು ಬೆಳಗಾವಿ, ಧಾರವಾಡ, ಕಲುಬುರಗಿ,ಬೀದರ್ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಜು. 30, 31 ರಂದು ಶಿವಮೊಗ್ಗ, ಹಾಸನ ,ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಜು.28 ರಂದು ಬೆಂಗಳೂರು ಸುತ್ತಮುತ್ತ ಮಳೆಯಾಗಲಿದೆ.



