ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾಲೇ ಇದೆ. ಇಂದು 86 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ನಿನ್ನೆ ಬರೋಬ್ಬರಿ 225 ಪಾಸಿಟಿವ್ ಪತ್ತೆಯಾಗುವ ಮೂಲಕ ಆತಂಕ ಮೂಡಿಸಿತ್ತು . ಇಂದು 86 ಪಾಸಿಟಿವ್ ಪತ್ತೆಯಾಗುವ ಮೂಲಕ ಕೊಂಚ ನೆಮ್ಮದಿ ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಇಂದು 85 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 1066 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತ 1979 ಪ್ರಕರಣಗಳಿದ್ದು, 867ಸಕ್ರಿಯ ಪ್ರಕರಣಗಳಿವೆ. ಇಂದು ಒಬ್ಬರು ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.



