ಡಿವಿಜಿ ಸುದ್ದಿ, ಬೆಂಗಳೂರು: ಕೇಂದ್ರ ಸರ್ಕಾರ ಅನ್‍ಲಾಕ್ -3 ಮಾರ್ಗಸೂಚಿ ಪ್ರಕಟಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದರ ಜೊತೆಗೆ ಸಂಡೇ ಲಾಕ್‍ಡೌನ್, ಶನಿವಾರ ರಜೆಯನ್ನು ರದ್ದುಗೊಳಿಸಿದೆ.
ಕೇಂದ್ರದ ಮಾರ್ಗಸೂಚಿಯಂತೆ ಆಗಸ್ಟ್ 1ರಿಂದ ನೈಟ್ ಕರ್ಫ್ಯೂ ರದ್ದು, ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ ಮುಂದುವರಿಯಲಿದೆ. ಇನ್ನು ಥಿಯೇಟರ್, ಬಾರ್, ರೆಸ್ಟೋರೆಂಟ್, ಮೆಟ್ರೋಗೆ ಅವಕಾಶ ಇಲ್ಲ.
ರಾಜಕೀಯ, ಧಾರ್ಮಿಕ ಸಮಾರಂಭ ಮಾಡುವಂತಿಲ್ಲ. ಕಂಟೈನ್‍ಮೆಂಟ್ ಝೋನ್‍ನಲ್ಲಿ ಯಾವುದೇ ಚಟುವಟಿಕೆಗೆ ಅವಕಾಶ ಇಲ್ಲ. ಬಫರ್ ಝೋನ್‍ಗಳಲ್ಲಿ ಬಿಗಿ ನಿಯಮ ಜಾರಿಗೆ ತಂದಿದೆ. ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ನೀಡಲಾಗಿದೆ.



