ಡಿವಿಜಿ ಸುದ್ದಿ, ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡುವ ಮೂಲಕ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದು, ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗ ಸೇರಿದಂತೆ ಒಟ್ಟು ಐವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.
ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ.
— B C Patil (@bcpatilkourava) July 31, 2020
ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು ಬಿ.ಸಿ. ಪಾಟೀಲ್ ಬರೆದುಕೊಂಡಿದ್ದಾರೆ.



