ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಗೆ ಬಿಟ್ಟು ಬಿಡದೇ ಕಾಡುತ್ತಿರುವ ಕೊರೊನಾ ಸೋಂಕು ಇಂದು ಕೂಡ 122 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿಂದು 136 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2,101 ಸೋಂಕಿತರ ಪೈಕಿ 1,202 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನು 851 ಸಕ್ರಿಯ ಪ್ರಕರಣಗಳಿವೆ.
ಎರಡು ದಿನದ ಹಿಂದೆ ಒಂದೇ ದಿನ ಇನ್ನೂರರ ಗಡಿ ದಾಟಿ ಆತಂಕ ಮೂಡಿಸಿದ್ದ ಕೊರೊನಾ ಪಾಸಿಟಿವ್ , ನಿನ್ನೆ 86 ಪ್ರಕರಣಗಳು ದಾಖಲಾಗಿದ್ದವು. ಆದರೆ, ಇಂದು ಮತ್ತೆ 122 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ.



