ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 178 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,387ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 89 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 1,479 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಇಂದು ಮೂರು ಸಾವು ಸಂಭವಿಸಿದ್ದು, ಜಿಲ್ಲೆಯಲ್ಲಿ 55 ಮಂದಿ ಸಾವನ್ನಪ್ಪಿದಂತಾಗಿದೆ. ಇನ್ನು 853 ಪ್ರಕರಣಗಳು ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, ನಿಯಂತ್ರಣಕ್ಕೆ ಬರುತ್ತಿಲ್ಲ. ಈಗಾಗಲೇ ಸೋಂಕಿತರ ಸಂಖ್ಯೆಗೆ ಹೊಲಿಸಿದರೆ, ಸಾವಿನ ಸಂಖ್ಯೆ ಹೆಚ್ಚಿದ್ದು ನಿಯಂತ್ರಣಕ್ಕೆ ತರುವಂತೆ ರಾಜ್ಯ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ, ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಪತ್ತೆಯಾದ 178 ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ ಅಧಿಕ 83, ಹರಿಹರ 24, ಜಗಳೂರು 01, ಚನ್ನಗಿರಿ 28, ಹೊನ್ನಾಳಿ 38, ಹೊರ ಜಿಲ್ಲೆ 04 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.



