Connect with us

Dvgsuddi Kannada | online news portal | Kannada news online

ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ವಿಡಿಯೋ ಸಂದೇಶದಲ್ಲಿ ಹೇಳಿದ್ದೇನು..?  

ಪ್ರಮುಖ ಸುದ್ದಿ

ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ವಿಡಿಯೋ ಸಂದೇಶದಲ್ಲಿ ಹೇಳಿದ್ದೇನು..?  

ಡಿವಿಜಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಪಾಸಿಟಿವ್ ಬಂದು  ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರು ಆತಂಕ ಬೇಡಬೇಕಿಲ್ಲ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿದ್ದಾರೆ ಎಂದು ವಿಡಿಯೋ ಸಂದೇಶವನ್ನು ಕಳುಹಿಸಿದ್ದಾರೆ.

ಭಾನುವಾರ ರಾತ್ರಿ 8-9 ಗಂಟೆಗೆ ಕೊರೊನಾ ಪಾಸಿಟಿವ್ ಎಂದು ತಿಳಿಯಿತು. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ಭಾನುವಾರ ರಾತ್ರಿ ಹಾಗೂ ಇಂದು ಬೆಳಗ್ಗೆ ಪರೀಕ್ಷೆ ಮಾಡಿ ಯಾವುದೇ ತೊಂದರೆ ಇಲ್ಲ ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ಹೇಳಿದ್ದಾರೆ ಎಂದು ವಿವರಿಸಿದ್ದಾರೆ.

ಈಗಾಗಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಅನೇಕ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ.

ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಸರ್ಕಾರದ ಯಾವುದೇ ಕೆಲಸಗಳಿಗೆ ಅಡ್ಡಿಯಾಗಬಾರದೆಂದು ಸೂಚಿಸಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಗುಣಮುಖನಾಗಿ ಹೊರ ಬಂದು ಕರ್ತವ್ಯದಲ್ಲಿ ತೊಡಗುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಬೆಂಬಲ ಇರಲಿ. ನಾಡಿನ ಆರೂವರೆ ಕೋಟಿ ಜನರ ಆರೋಗ್ಯ ಮುಖ್ಯ. ಎಲ್ಲರೂ ದಯವಿಟ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ. ಇದರಿಂದ ಮಾತ್ರ ಕೊರೊನಾದಿಂದ ತಪ್ಪಿಸಿಕೊಳ್ಳಲು ಸಾಧ್ಯ. ಇದನ್ನು ಎಲ್ಲರೂ ಎಚ್ಚರಿಕೆಯಿಂದ ಪಾಲಿಸಬೇಕೆಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top