ಡಿವಿಜಿ ಸುದ್ದಿ, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.
ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಆರೋಗ್ಯದ ಸ್ಥಿತಿ ಕುರಿತು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯನವರ ಆರೋಗ್ಯ ಸ್ಥಿರವಾಗಿದೆ. ಜ್ವರ ಇದ್ದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷ ವೇಳೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ತಂಡ ಆರೋಗ್ಯದ ಬಗ್ಗೆ ಮೇಲೆ ನಿಗಾ ವಹಿಸಿದೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು, ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ನೋಡಿಕೊಳ್ಳುತ್ತಿದ್ದಾರೆ. ಈ ಬಗ್ಗ ಟ್ವೀಟ್ ಮಾಡಿದ ಸಿದ್ದರಾಮಯ್ಯ , ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.



