ಡಿವಿಜಿ ಸುದ್ದಿ, ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದ ದಿನಾಂಕ ಇನ್ನೂ ಅಂತಿಮವಾಗಿಲ್ಲ. ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸುಳ್ಳು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಈ ಬಗ್ಗೆ ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ತಿಳಿಸಿದ್ದಾರೆ.
ಕೊರೊನಾ ಎಲ್ಲಡೆ ಹರಡುತ್ತಿದ್ದರೂ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ಸಾಹಸ ಮಾಡಿದೆ. ವಿದ್ಯಾರ್ಥಿಗಳು ಸಹ ಅಷ್ಟೇ ಧೈರ್ಯವಾಗಿ ಪರೀಕ್ಷೆ ಎದುರಿಸಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ದಿನಾಂಕವನ್ನು ಇನ್ನೂ ಅಂತಿಮಪಡಿಸಿಲ್ಲ ಎಂದರು .