ಡಿವಿಜಿ ಸುದ್ದಿ, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್ ದೃಢವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಬರೆದುಕೊಂಡಿದ್ದಾರೆ.
ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರು ಕೂಡ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.



