ಡಿವಿಜಿ ಸುದ್ದಿ, ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ 5 ದಿನದ ಹಿಂದೆ ಕೊರೊನಾ ಪತ್ತೆಯಾಗಿತ್ತು. ಆ ಬಳಿಕ ಶಾಮನೂರು ಶಿವಶಂಕರಪ್ಪ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದ್ದಾಗ ಪಾಸಿಟಿವ್ ಪತ್ತೆಯಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ.



