ಡಿವಿಜಿ ಸುದ್ದಿ, ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಶೇ . 71.80 ರಷ್ಟು ಫಲಿತಾಂಶ ಬಂದಿದೆ. ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,28,734 ಅನುತ್ತೀರ್ಣರಾಗಿದ್ದಾರೆ. ಇದರೊಂದಿಗೆ ಒಟ್ಟು ಶೇ. 71.80 ಫಲಿತಾಂಶ ಬಂದಂತಾಗಿದೆ. ಕಳೆದ ಸಾಲಿನಲ್ಲಿ ಶೇ. 73.70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ. 66.41 ಬಾಲಕರು ಹಾಗೂ ಶೇ.77.74 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ kseeb.kar.nic.in, karresults.nic.in ಮತ್ತು results.nic.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯವಿದೆ. ಚಿಕ್ಕಬಳ್ಳಾಪುರದಲ್ಲಿ ಅತಿಹೆಚ್ಚು ಮತ್ತು ಯಾದರಿಗಿಯಲ್ಲಿ ಅತಿ ಕಡಿಮೆ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
https://www.facebook.com/nimmasuresh/videos/3714652211895430/