ಡಿವಿಜಿ ಸುದ್ದಿ, ಬೆಂಗಳೂರು:ಕೊರೊನಾ ಸೋಂಕಿನಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಗಸ್ಟ್ 2ರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಕೊರೊನಾ ಸೋಂಕಿನ ಲಕ್ಷಣಗಳು ಯಡಿಯೂರಪ್ಪ ಅವರಲ್ಲಿ ಕಾಣಿಸಿರಲಿಲ್ಲ. ಆದರೆ, ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಯಡಿಯೂರಪ್ಪ ಅವರ ಕಾರು ಚಾಲಕ, ಅಡುಗೆ ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿತ್ತು. ಆಗ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿತ್ತು.



