ಡಿವಿಜಿ ಸುದ್ದಿ, ದಾವಣಗೆರೆ : ಸಾರ್ವಜನಿಕ ಓದುಗರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯವನ್ನು ಪ್ರಾರಂಭಿಸಲಾಗಿದೆ.
ಈ ಡಿಜಿಟಲ್ ಗ್ರಂಥಾಲಯ ಆ್ಯಪ್‍ನಲ್ಲಿ ಎಲ್ಲ ವಯೋಮಾನದ ಓದುಗರಿಗೆ ಅನುಕೂಲವಾಗುವಂತೆ ಇ-ಪುಸ್ತಕಗಳು ಹಾಗೂ ವಿಡಿಯೋಗಳನ್ನು ಅಪ್‍ಲೋಡ್ ಮಾಡಲಾಗಿದ್ದು, ತಮ್ಮ ಸ್ಮಾರ್ಟ್‍ಫೋನ್‍ನ ಪ್ಲೇ ಸ್ಟೋರ್‍ನಲ್ಲಿ e-Sarvajanika Granthalaya ಎಂದು ಟೈಪ್ ಮಾಡಿ ಈ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ. ಇದರಿಂದ ಮನೆಯಲ್ಲೇ ಕುಳಿತು ಗ್ರಂಥಾಲಯದ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.



