ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆ ಆ. 21 ಹಾಗೂ 22ರಂದು ಗೌರಿ ಗಣೇಶ ಹಬ್ಬಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಮೊಹರಂ ಹಬ್ಬದಲ್ಲಿ ತಾಬೂತುಗಳ ಪ್ರತಿಷ್ಠಾಪನೆ ಕೂಡ ನಿಷೇಧ ಹೇರಲಾಗಿದೆ. ಗಣೇಶಮೂರ್ತಿ ವಿಸರ್ಜನೆ ಮೆರವಣಿಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ.ಕೇಂದ್ರ ಸರ್ಕಾರದ ತೆರವು–3 ಮಾರ್ಗಸೂಚಿ ಆ. 31ರವರೆಗೆ ಇದ್ದು, ಈ ವೇಳೆ ಯಾವುದೇ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳಿಗೆ ಅವಕಾಶವಿಲ್ಲ. ಹೀಗಾಗಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮಗಳು ಹಾಗೂ ಡಿ.ಜೆ. ಸಿಸ್ಟಂ ಬಳಸುವಂತಿಲ್ಲ ಎಂದು ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ 324 ಕಂಟೈನ್ಮೆಂಟ್ ವಲಯಗಳು ಇದ್ದು, ಬಂದೋಬಸ್ತ್ಗಾಗಿ ಈಗಾಗಲೇ ಗರಿಷ್ಠ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



