Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಎಫ್ ಐ, ಎಸ್ ಡಿಪಿ ನಿಷೇಧಕ್ಕೆ ಒತ್ತಾಯ

ದಾವಣಗೆರೆ

ದಾವಣಗೆರೆ: ಪಿಎಫ್ ಐ, ಎಸ್ ಡಿಪಿ ನಿಷೇಧಕ್ಕೆ ಒತ್ತಾಯ

ಡಿವಿಜಿ ಸುದ್ದಿ, ದಾವಣಗೆರೆ:  ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದ ಘಟನೆ ಹಿಂದೆ ಪಿಎಫ್ ಐ ಮತ್ತು ಎಸ್ ಡಿಪಿಐ ಕೈವಾಡವಿದ್ದು, ಸಂಘಟನೆಯನ್ನು ನಿಷೇಧಿಸಬೇಕೆಂದು ವಿಶ್ವ ಹಿಂದೂ ಪರಿಷತ್ ನಗರಾಧ್ಯಕ್ಷ ರವೀಂದ್ರ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ಈ ಸಂಘಟನೆ ಮೇಲೆ ದೇಶದ್ರೋಹ ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು.  ಕೋಮುಗಲಭೆ, ಸಾರ್ವಜನಿಕ ಸ್ವತ್ತು ಹಾನಿ, ಮಾಧ್ಯಮ, ಪೋಲಿಸ್ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಸ್ಥಳೀಯ ಶಾಸಕ ಅಖಂಡ ಶ್ರೀನಿವಾಸ್ ಅವರ ಮೇಲೆಯೂ ಹಲ್ಲೆಗೆ ಯತ್ನಿಸಲಾಗಿದೆ ಎಂದರು.

ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸುವುದನ್ನು ಬಿಟ್ಟು ಕಾಂಗ್ರೆಸ್  ಸಮರ್ಥಿಸಿಕೊಳ್ಳುತ್ತಿರುವುದು ದುರಂತ. ಹಿಂದೂಗಳನ್ನು ಈ ವಿಚಾರದಲ್ಲಿ ಎಳೆದು ತರಲಾಗುತ್ತಿದೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಹವಣಿಸುತ್ತಿದ್ದಾರೆ. ಇಂತಹ ಸಂಘಟನೆಗಳನ್ನು ಬ್ಯಾನ್ ಮಾಡಬೇಕಿದೆ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಸವರಾಜ್ ಗುಬ್ಬಿ, ಎಸ್ ರಾಘವೇಂದ್ರ, ಎನ್ ಮಲ್ಲೇಶ್, ಎಸ್ ಓಜಿ ಹನುಮಂತಪ್ಪ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top