Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಮಹಾ ಸ್ಫೋಟ; ಒಂದೇ ದಿನ 323 ಪಾಸಿಟಿವ್; 3 ಸಾವು

ದಾವಣಗೆರೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಮಹಾ ಸ್ಫೋಟ; ಒಂದೇ ದಿನ 323 ಪಾಸಿಟಿವ್; 3 ಸಾವು

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾ ಸ್ಫೋಟ ಸಂಭವಿಸಿದ್ದು, ಒಂದೇ ದಿನ 323 ಕೊರೊನಾ ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ಇದು ಜಿಲ್ಲೆಯಲ್ಲಿ ಒಂದೇ ದಿನ ದಾಖಲಾದ ಅತಿ   ಪ್ರಕರಣ ಇದಾಗಿದೆ.

ಜಿಲ್ಲೆಯಲ್ಲಿಂದು 224 ಮಂದಿ ಕೊರೊನಾದಿಂದ  ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,392 ಮಂದಿಯಲ್ಲಿ 2872 ಮಂದಿ ಗುಣಮುಖರಾಗಿದ್ದಾರೆ. ಇಂದು ಮೂರು ಮಂದಿ ಕೊರೊನಾದಿಂದ ಮೃತಪಟ್ಟಿದ್ದು,  ಜಿಲ್ಲೆಯಲ್ಲಿ ಮೃತರ ಸಂಖ್ಯೆ 114ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನು 1,406 ಸಕ್ರಿಯ ಪ್ರಕಣಗಳಿವೆ.

ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ ಅಧಿಕ 165, ಹರಿಹರ 64,ಜಗಳೂರು 16,ಚನ್ನಗಿರಿ 34, ಹೊನ್ನಾಳಿ 39 ಹಾಗೂ ಹೊರ ಜಿಲ್ಲೆಯ 05 ಮಂದಿಗೆ ಕೊರೊನಾ ಪತ್ತೆಯಾಗಿದೆ. ದಾವಣಗೆರೆಯ ಜಾಲಿನಗರದ 70 ವರ್ಷದ ವೃದ್ಧ, ಎಂಬಿ ಬಡಾವಣೆಯ 64 ವರ್ಷದ ವೃದ್ಧ ಹಾಗೂ ಶ್ರೀನಿವಾನಗರದ 80 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top