Connect with us

Dvgsuddi Kannada | online news portal | Kannada news online

ಕೊರೊನಾಗೆ ಮೂರು ಲಸಿಕೆ ತಯಾರು; ಗ್ರೀನ್ ಸಿಗ್ನಲ್ ಸಿಕ್ಕ ನಂತರ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ: ಪ್ರಧಾನಿ ಮೋದಿ

ರಾಷ್ಟ್ರ ಸುದ್ದಿ

ಕೊರೊನಾಗೆ ಮೂರು ಲಸಿಕೆ ತಯಾರು; ಗ್ರೀನ್ ಸಿಗ್ನಲ್ ಸಿಕ್ಕ ನಂತರ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ: ಪ್ರಧಾನಿ ಮೋದಿ

ನವದೆಹಲಿ: ನಮ್ಮ ದೇಶದಲ್ಲಿ ಒಂದಲ್ಲ ಎರಡಲ್ಲ ಮೂರು ಕೊರೊನಾ ಲಸಿಕೆಗಳು ತಯಾರಾಗುತ್ತಿವೆ. ಲಸಿಕೆ ಉತ್ಪಾದನೆಗೆ  ವಿಜ್ಞಾನಿಗಳಿಂದ ಗ್ರೀನ್ ಸಿಗ್ನಲ್  ಸಿಕ್ಕಿ ನಂತರ, ಅಧಿಕ ಪ್ರಮಾಣದಲ್ಲಿ ಉತ್ಪಾದನೆ ಮಾಡಿ ದೇಶ ವಾಸಿಗಳಿಗೆ ಹಂಚಿಕೆ ಮಾಡಲು ಮಾರ್ಗಸೂಚಿ ತಯಾರಿಸಲಾಗಿದೆ  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ 7ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಮೋದಿ, ಪ್ರತಿಯೊಬ್ಬರು ಕೊರೊನಾಗೆ ಲಸಿಕೆ ಯಾವಾಗ ಬರುತ್ತದೆ ಎಂದು ಕೇಳುತ್ತಿದ್ದಾರೆ. ಆದರೆ, ದೇಶದಲ್ಲಿ ಮೂರು ಲಸಿಕೆಗೆಗಳು ವಿವಿಧ ಹಂತದ ಪ್ರಯೋಗದಲ್ಲಿದೆ. ವಿಜ್ಞಾನಿಗಳಿಂದ ಈ ಲಸಿಕೆಗೆ ಹಸಿರು ನಿಶಾನೆ ಸಿಕ್ಕಿದ ಕೂಡಲೇ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಕೈಗೊಳ್ಳಲಾಗುವುದು ಎಂದರು .

pm modi independence day 2

ಕೊರೊನಾ ವಾರಿಯರ್ಸ್‌ಗಳಿಗೆ ಗೌರವ ಸಲ್ಲಿಸಿ ಭಾಷಣ ಆರಂಭಸಿದ ಮೋದಿ ಕೊರೊನಾ ಬಂದ ಸಮಯದಲ್ಲಿ 3 ಸಾವಿರ ಮಂದಿಗೆ ಪ್ರತಿ ದಿನ ಪರೀಕ್ಷೆ ನಡೆಯುತ್ತಿತ್ತು. ಆದರೆ ಈಗ ಪ್ರತಿ ದಿನ 7 ಲಕ್ಷ ಮಂದಿಗೆ ಪರೀಕ್ಷೆ ಮಾಡುತ್ತಿದ್ದೇವೆ. ಆರಂಭದಲ್ಲಿ ಎನ್‌ 95 ಮಾಸ್ಕ್‌, ಪಿಪಿಇ ಕಿಟ್‌, ವೆಂಟಿಲೇಟರ್‌ಗಳು ಉತ್ಪಾದನೆ ಆಗುತ್ತಿರಲಿಲ್ಲ. ಆದರೆ ಈಗ ಇವುಗಳನ್ನು ಉತ್ಪಾದಿಸಲು ಸಾಮರ್ಥ್ಯ ಪಡೆದಿದ್ದೇವೆ. ಆತ್ಮ ನಿರ್ಭರ ಭಾರತದ ಕನಸು ನನಸು ಮಾಡಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಡಿಜಿಟಲ್‌ ಹೆಲ್ತ್‌ ಮಿಷನ್‌ ಮೂಲಕ ಪ್ರತಿ ಭಾರತೀಯರಿಗೆ ಡಿಜಿಟಲ್‌ ಆರೋಗ್ಯ ಕಾರ್ಡ್‌ ನೀಡಲು ಸರ್ಕಾರ ಮುಂದಾಗಿದೆ. ರೋಗಿಗಳ ಸಂಪೂರ್ಣ ಚಿಕಿತ್ಸೆಯ ವಿವರ ವೈದ್ಯರಿಗೆ ಇದರಿಂದ ಸಿಗಲಿದೆ ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top