ಡಿವಿಜಿ ಸುದ್ದಿ, ದಾವಣಗೆರೆ: 74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಡಾಗ್ ‘ತುಂಗಾ’ಳನ್ನು ಸನ್ಮಾನಿಸಿದರು.
ತುಂಗಾ ಇತ್ತೀಚೆಗೆ ಜಿಲ್ಲೆಯ ಕೊಲೆಯೊಂದರ ಆರೋಪಿ ಪತ್ತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿತ್ತು. ದಾವಣಗೆರೆಯಿಂದ 11 ಕಿ.ಮೀ. ದೂರು ಹೋಗಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿತ್ತು. ತುಂಬಾಳ ಸಾಧನೆಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿತ್ತು.

ಈ ಸಂದರ್ಭದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್, ಮಹಾನಗರಪಾಲಿಕೆ ಮಹಾಪೌರ ಬಿ.ಜಿ.ಅಜಯ ಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮತ್ತಿತರರು ಹಾಜರಿದ್ದರು.



