ನವದೆಹಲಿ: ಕ್ರಿಕೆಟ್‌ನ ಎಲ್ಲಾ ಮಾದರಿಯಲ್ಲಿಯೂ ಅತ್ಯುತ್ತಮ ನಾಯಕತ್ವ ಪ್ರದರ್ಶಿಸಿರುವ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಮೂಲಕ ಸಾರ್ವಜನಿಕ ಬದುಕಿನಲ್ಲಿ ಹೋರಾಟ ಮುಂದುವರಿಸಲಿ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
M. S. Dhoni is retiring from Cricket but not from anything else. His talent-to be able to fight against odds and his inspiring leadership of a team that he has demonstrated in cricket is needed in public life. He should fight in LS General Elections in 2024.
— Subramanian Swamy (@Swamy39) August 16, 2020
ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಿದ ನಂತರ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಎಂ.ಎಸ್. ಧೋನಿ ಕ್ರಿಕೆಟ್‌ನಿಂದ ನಿವೃತ್ತರಾಗುತ್ತಿದ್ದಾರೆ. ಆದರೆ ಬೇರೆ ಯಾವುದರಿಂದಲೂ ಅಲ್ಲ. ಅವರ ಪ್ರತಿಭೆಯು ಸಮಸ್ಯೆಗಳ ವಿರುದ್ಧ ಹೋರಾಡಲು ನೆರವಾಗುತ್ತದೆ. ಕ್ರಿಕೆಟ್‌ನಲ್ಲಿ ಅವರು ಪ್ರದರ್ಶಿಸಿದ ಸ್ಪೂರ್ತಿದಾಯಕ ನಾಯಕತ್ವ ಸಾರ್ವಜನಿಕ ಜೀವನಕ್ಕೂ ಅಗತ್ಯವಿದೆ. ಅವರು 2024ರ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಹೋರಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಶನಿವಾರ ವಿದಾಯ ಹೇಳಿದ್ದರು.



